Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಕ್ಷತ್ರಸೈನ್ಯವೆಲ್ಲಾ ಕ್ಷಯಿಸುವದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವದು; ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:4
20 ತಿಳಿವುಗಳ ಹೋಲಿಕೆ  

“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.


ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!


“ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.


ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು