ಯೆಶಾಯ 34:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನಮಾಡಿ ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯತೀರಿಸುವದಕ್ಕೆ ದುಮುಕುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು. ಅಧ್ಯಾಯವನ್ನು ನೋಡಿ |