Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಖಡ್ಗವು ರಕ್ತಮಯವಾಗಿದೆ; ಅದು ವಪೆಯಿಂದಲೂ ಕುರಿ ಹೋತಗಳ ರಕ್ತದಿಂದಲೂ ಟಗರುಗಳ ಹುರುಳಿಕಾಯಿಗಳ ಕೊಬ್ಬಿನಿಂದಲೂ ಭರಿತವಾಗಿದೆ; ಯೆಹೋವನು ಬೊಚ್ರದಲ್ಲಿ ಬಲಿಯನ್ನೂ ಎದೋಮ್ ಸೀಮೆಯಲ್ಲಿ ದೊಡ್ಡ ಕೊಲೆಯನ್ನೂ ಮಾಡಬೇಕೆಂದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:6
25 ತಿಳಿವುಗಳ ಹೋಲಿಕೆ  

ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.


ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”


ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?


‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.


ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.


ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು