Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:8
51 ತಿಳಿವುಗಳ ಹೋಲಿಕೆ  

ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.


ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.


ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.


ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.


ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.


ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.


ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?


ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.


ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.


ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು