Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಿಂಹವು ಅಲ್ಲಿರದು, ಕ್ರೂರ ಜಂತು ಅಲ್ಲಿ ಸೇರದು, ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:9
23 ತಿಳಿವುಗಳ ಹೋಲಿಕೆ  

ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.


ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,


ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.


ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು