ಯೆಶಾಯ 36:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”
17 ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;
17 ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು;
17 ಹೀಗೆ ನೀವು ಸೇವಿಸುತ್ತಾ ಇದ್ದರೆ ನಾನು ಬಂದು ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ನಿಮ್ಮನ್ನು ಕರೆದೊಯ್ಯವೆನು. ಆ ಹೊಸ ದೇಶದಲ್ಲಿ ನೀವು ಒಳ್ಳೆಯ ಧಾನ್ಯವನ್ನು ಮತ್ತು ಹೊಸ ದ್ರಾಕ್ಷಾರಸವನ್ನು, ರೊಟ್ಟಿಯನ್ನು ಮತ್ತು ದ್ರಾಕ್ಷಿತೋಟಗಳನ್ನು ಹೊಂದುವಿರಿ.”
17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.
“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?