Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯುದ್ಧಕ್ಕೆ ಬೇಕಾದ ವಿವೇಕ ಹಾಗೂ ಶಕ್ತಿ ಉಂಟೆಂಬ ನಿನ್ನ ಮಾತು ಬರೀ ಬಾಯಿಮಾತು ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿಮಾತೇ ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಏಳಬೇಕಾದರೆ ಯಾರ ಮೇಲೆ ಭರವಸವಿಟ್ಟಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:5
8 ತಿಳಿವುಗಳ ಹೋಲಿಕೆ  

ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.


ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು