Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:7
15 ತಿಳಿವುಗಳ ಹೋಲಿಕೆ  

ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?


ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,


“ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು