ಯೆಶಾಯ 37:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅರಸನಾದ ಹಿಜ್ಕೀಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖಪಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.