Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:16
34 ತಿಳಿವುಗಳ ಹೋಲಿಕೆ  

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.


ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.


ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.


ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.


ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.


ಹಿಜ್ಕೀಯನು ಯೆಹೋವನನ್ನು ಕುರಿತು


ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.


ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,


ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು