Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:23
42 ತಿಳಿವುಗಳ ಹೋಲಿಕೆ  

“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.


ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.


ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.


ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.


ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.


ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು