Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:24
21 ತಿಳಿವುಗಳ ಹೋಲಿಕೆ  

ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.


ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.


ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.


ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.


ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.


“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು