Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 [ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:25
8 ತಿಳಿವುಗಳ ಹೋಲಿಕೆ  

ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.


ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.


ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.


ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.


ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.


ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.


ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು