Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:27
17 ತಿಳಿವುಗಳ ಹೋಲಿಕೆ  

ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು