ಯೆಶಾಯ 37:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು. ಅಧ್ಯಾಯವನ್ನು ನೋಡಿ |