ಯೆಶಾಯ 37:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು. ಅಧ್ಯಾಯವನ್ನು ನೋಡಿ |