Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:35
19 ತಿಳಿವುಗಳ ಹೋಲಿಕೆ  

ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.


ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.


ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.


ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.


ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ.


ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು