Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಸ್ಸೀರಿಯದ ಸೇನಾಪತಿಯು ತನ್ನ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8-9 ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:8
10 ತಿಳಿವುಗಳ ಹೋಲಿಕೆ  

ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.


ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.


ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.


ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,


ಲಾಕೀಷ್, ಬೊಚ್ಕತ್, ಎಗ್ಲೋನ್,


ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು