Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:10
12 ತಿಳಿವುಗಳ ಹೋಲಿಕೆ  

ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.


ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.


ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.


ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.


ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.


ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.


ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.


ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು