Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ ಬೆಳಗಿನ ತನಕ ತಡಕೊಂಡೇ ಇದ್ದೆನು. ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಡೀರಾತ್ರಿ ನಾನು ಸಿಂಹದಂತೆ ಗರ್ಜಿಸಿದೆನು. ಆದರೆ ಸಿಂಹವು ಎಲುಬುಗಳನ್ನು ಜಗಿದು ಪುಡಿಮಾಡುವಂತೆ ನನ್ನ ನಿರೀಕ್ಷೆಯೆಲ್ಲಾ ಜಜ್ಜಿಹೋಯಿತು. ನೀನು ನನ್ನ ಜೀವಿತವನ್ನು ಅಷ್ಟು ಅಲ್ಪಕಾಲಕ್ಕೇ ಕೊನೆಗೊಳಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:13
15 ತಿಳಿವುಗಳ ಹೋಲಿಕೆ  

ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.


ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.


ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.


ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.


ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ


ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;


ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.


ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು