Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವುದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:5
29 ತಿಳಿವುಗಳ ಹೋಲಿಕೆ  

ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.


ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.


‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.


ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.


ಆಗ ಯೆಹೋವನು ಯೆಶಾಯನಿಗೆ,


ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.


ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’


ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು