Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಗೋ, ಅಹಾಜನು ಕಟ್ಟಿಸಿದ ನೆರಳು ಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಗೋ, ಆಹಾಜನ ಮೆಟ್ಟಿಲಲ್ಲಿರುವ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಹೋಗುವಂತೆ ಮಾಡುವೆನು ಎಂದು ನಿನ್ನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು” ಎಂದು ಹೇಳಿದನು. ಅದರಂತೆ ಮೆಟ್ಟಿಲಲ್ಲಿರುವ ಸೂರ್ಯನ ನೆರಳು ಹತ್ತು ಮೆಟ್ಟಿಲು ಹಿಂದಕ್ಕೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:8
8 ತಿಳಿವುಗಳ ಹೋಲಿಕೆ  

ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.


ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು