Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 4:3
33 ತಿಳಿವುಗಳ ಹೋಲಿಕೆ  

ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.


ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.


“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.


‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.


ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.


ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು