Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ಇಂಥದನ್ನು ದೇವರಿಗೆ] ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ ಅಲುಗದ ವಿಗ್ರಹವನ್ನು ಮಾಡಿಸಲು ಕುಶಲನನ್ನು ವಿಚಾರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:20
9 ತಿಳಿವುಗಳ ಹೋಲಿಕೆ  

ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.


ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು