Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನಮಾಡುತ್ತೀರಿ ಎಂದು ಸದಮಲ ಸ್ವಾವಿುಯು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? ನನಗೆ ಸಮಾನರು ಯಾರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಪರಿಶುದ್ಧ ದೇವರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:25
8 ತಿಳಿವುಗಳ ಹೋಲಿಕೆ  

ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು