Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಯೆಹೋವ ದೇವರು ನಿರಂತರವಾದ ದೇವರೂ, ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವುದಿಲ್ಲ, ಬಳಲುವುದಿಲ್ಲ, ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:28
37 ತಿಳಿವುಗಳ ಹೋಲಿಕೆ  

ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?


“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.


ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;


ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.


ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.


“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


“ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ.


ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು