Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:30
11 ತಿಳಿವುಗಳ ಹೋಲಿಕೆ  

ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.


ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.


ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ


ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.


ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು