Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:31
46 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.


ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.


ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.


ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.


ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,


ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.


ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.


ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.


ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.


ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.


“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. ಸೆಲಾ


ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.


ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು