Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:10
63 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.


ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು.


ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.


ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.


ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.


ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.


ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.


ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”


‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.


ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.


ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.


ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.


ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು