Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:14
36 ತಿಳಿವುಗಳ ಹೋಲಿಕೆ  

ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”


ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”


ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.


ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.


ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು