ಯೆಶಾಯ 41:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ. ಅಧ್ಯಾಯವನ್ನು ನೋಡಿ |