Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:16
31 ತಿಳಿವುಗಳ ಹೋಲಿಕೆ  

ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.


ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.


ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.


ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;


ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು