Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:17
44 ತಿಳಿವುಗಳ ಹೋಲಿಕೆ  

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.


ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.


ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.


ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,


ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.


ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು