Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದಾಗತಕ್ಕವುಗಳನ್ನು ತಿಳಿಸಿರಿ; ನಾವು ಒಟ್ಟಿಗೆ ಕಕ್ಕಾಬಿಕ್ಕಿಯಾಗಿ ನೋಡುವಂತೆ ಮೇಲಾಗಲಿ ಕೇಡಾಗಲಿ ಏನಾದರೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ. ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:23
13 ತಿಳಿವುಗಳ ಹೋಲಿಕೆ  

ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.


ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ


ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.


ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.


ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.


ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು