Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂವಿುಯ ಕಟ್ಟಕಡೆಯವರು ನಡುಗಿದರು, ಎಲ್ಲರೂ ನೆರೆದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೂರ ಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದ್ವೀಪಗಳೆಲ್ಲವೂ ಕಂಡು ಬೆರಗಾದವು. ಭೂಮಿಯ ಕಟ್ಟಕಡೆಯು ನಡುಗಿತು. ಅವರು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:5
12 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ


ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.


ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.


ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು.


ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.”


ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು