Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು : “ನೀವೇ ನಮ್ಮ ದೇವರು"ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು ನೀವೇ ನಮ್ಮ ದೇವರುಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:17
13 ತಿಳಿವುಗಳ ಹೋಲಿಕೆ  

ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.


“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.


ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು