ಯೆಶಾಯ 42:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿ |