Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:4
33 ತಿಳಿವುಗಳ ಹೋಲಿಕೆ  

ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.


“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು