ಯೆಶಾಯ 42:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6-7 “ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,” ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.