ಯೆಶಾಯ 43:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನ ಮಾತೇನಂದರೆ - ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು; ನೀವು ನನ್ನನ್ನು ತಿಳಿದು ನಂಬಿ ನನ್ನನ್ನೇ ಪರಮಾತ್ಮನು ಎಂದು ಗ್ರಹಿಸುವ ಹಾಗೆ [ಇದನ್ನು ನಡಿಸಿದೆನು]; ನನಗಿಂತ ಮುಂಚೆ ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |