ಯೆಶಾಯ 43:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾವನು ಅಶ್ವರಥಭಟಸೈನ್ಯಗಳನ್ನು ಹೊರಡಿಸಿ ಅವು ಬಿದ್ದು ಏಳಲಾರದಂತೆಯೂ ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದನೋ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನನ್ನ ವಿರುದ್ಧವಾಗಿ ಯುದ್ಧಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತುಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ರಥಗಳನ್ನು, ಕುದುರೆಗಳನ್ನು, ದಂಡನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ, ದೀಪದ ಬತ್ತಿ ನಂದಿ ಆರಿಹೋಗುವಂತೆಯೂ ಮಾಡಿದಾತನು ಇಂತೆನ್ನುತ್ತಾನೆ: ಅಧ್ಯಾಯವನ್ನು ನೋಡಿ |