Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:2
40 ತಿಳಿವುಗಳ ಹೋಲಿಕೆ  

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.


ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.


ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು