Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ನಾನು ಪವಿತ್ರಾಲಯದ ಅಧಿಪತಿಗಳನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ ಇಸ್ರಾಯೇಲನ್ನು ದೂಷಣೆಗೂ ಗುರಿಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:28
26 ತಿಳಿವುಗಳ ಹೋಲಿಕೆ  

ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.


ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.


ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.


ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.


ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು