Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ ನಿನ್ನ ದೇವರಾದ ಇಸ್ರಾಯೇಲಿನ ಪರಿಶುದ್ಧನೂ, ನಿನ್ನ ರಕ್ಷಕನೂ ಆಗಿದ್ದೇನೆ. ಈಜಿಪ್ಟನ್ನು ನಿನ್ನ ವಿಮೋಚನೆಗೂ, ಇಥಿಯೋಪಿಯ ಮತ್ತು ಸೆಬಾ ಸೀಮೆಗಳನ್ನು ನಿನಗೋಸ್ಕರ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:3
29 ತಿಳಿವುಗಳ ಹೋಲಿಕೆ  

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”


ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.


ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು.


ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”


“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?


ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು