ಯೆಶಾಯ 44:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ. ಅಧ್ಯಾಯವನ್ನು ನೋಡಿ |