ಯೆಶಾಯ 44:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |