ಯೆಶಾಯ 44:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು. ಅಧ್ಯಾಯವನ್ನು ನೋಡಿ |