ಯೆಶಾಯ 44:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ. ಅಧ್ಯಾಯವನ್ನು ನೋಡಿ |