Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:26
53 ತಿಳಿವುಗಳ ಹೋಲಿಕೆ  

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.


ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.


ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”


ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.


ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


“ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.


ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.


ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,


ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?


ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”


ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”


ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.


ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.


ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.


ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,


ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು