Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 (ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಅನ್ಯಜನರಲ್ಲಿ] ಒಬ್ಬನು - ನಾನು ಯೆಹೋವನ ಭಕ್ತನು ಎಂದು ಹೇಳಿಕೊಳ್ಳುವನು; ಇನ್ನೊಬ್ಬನು ಯಾಕೋಬ್ಯನು ಎನಿಸಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಯೆಹೋವದಾಸನು ಎಂದು ಬರೆದುಕೊಂಡು ಇಸ್ರಾಯೇಲ್ಯನೆಂಬ ಬಿರುದನ್ನು ಧರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:5
16 ತಿಳಿವುಗಳ ಹೋಲಿಕೆ  

ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.


ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.


ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು